ದಾವಣಗೆರೆ; ಹೇ.., ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ. ನಮ್ಮ ಬಳಿಯೂ ದಾಖಲೆ ಇದೆ. ಮುಂದೆ ಸಿಎಂ ಸಿದ್ದರಾಮಯ್ಯ ಜೊತೆ ಮಾತಾಡಿ ಬಗೆಹರಿಸಿಕೊಳ್ಳುತ್ತೇನೆ ನಡಿ ಎಂದು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸಿಡಿಮಿಡಿಗೊಂಡರು.
ಈ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಠಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ ಬಳಿ ಅಂಕಿ ಅಂಶಗಳಿವೆ ಎಂದಿದ್ದರು. ಇದಕ್ಕೆ ತಿರುಗೇಟು ನೀಡಿದ ಶಾಮನೂರು ಶಿವಶಂಕರಪ್ಪ, ಲಿಂಗಾಯತರಿಗೆ ಎಲ್ಲಿ ಅನ್ಯಾಯ ಆಗಿದೆ ಎಂಬುದನ್ನು ಅವರಿಗೆ ತೋರಸ್ತೀವಿ. ನಮ್ಮ ಬಳಿಯೂ ದಾಖಲೆ ಇದೆ ಎಂದು ಕಿಡಿಕಾರಿದರು.
ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ. ಒಂದು ಡಿಸಿ ಕೊಟ್ಟಿಲ್ಲ ಸರ್ಕಾರದಲ್ಲಿ ಏಳು ಸಚಿವ ಸ್ಥಾನ ನೀಡಿದ್ದಾರೆ. ಅದರ ಬಗ್ಗೆ ಪ್ರಶ್ನೆ ಇಲ್ಲ. ನಮ್ಮ ಲಿಂಗಾಯತ ಸಮಾಜದ ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳ ಬಗ್ಗೆ ಹೇಳುತ್ತಿರುವೆ. ನಾನು ಸತ್ಯ ಹೇಳಿದ್ದೇನೆ ಎಂದರು.
ನನ್ನ ಹೇಳಿಕೆಗೆ ಎಂಎಲ್ಸಿ ಹೆಚ್ ವಿಶ್ವನಾಥ ಹೇಳಿಕೆ ನೀಡಿದ್ದಾರೆ. ನಾನು ಸತ್ಯ ಹೇಳಿದ್ದೇನೆ. ವಿಶ್ವನಾಥ ತರ ನಾನು ಯಾರಿಗೋ ಬೆಣ್ಣೆ ಹಚ್ಚಿ ಎಂಎಲ್ಸಿ ಆಗಿಲ್ಲ. ಹೆಚ್. ವಿಶ್ವನಾಥ್ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ ಎಂದರು.
ಲಿಂಗಾಯತರಿಗೆ ಏಳು ಮಂತ್ರಿ ಸ್ಥಾನ ಕೊಟ್ಟಿದ್ದೇವೆ. ಇನ್ನೆಷ್ಟು ಮಂತ್ರಿ ಸ್ಥಾನ ಕೊಡಬೇಕು. ಲಿಂಗಾಯತ ನಾಯಕರು ಸಿದ್ದರಾಮಯ್ಯ ಅವರಿಂದಲೇ ಗೆದ್ದು ಬಂದಿರೋದು ಎಂದು ಹೆಚ್.ವಿಶ್ವನಾಥ್ ಹೇಳಿದ್ದರು.



