ದಾವಣಗೆರೆ: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಟಿಕೆಟ್ ಗೆ ಅರ್ಜಿ ಸಲ್ಲಿಸುವ ಮುನ್ಸೂಚನೆ ನೀಡಿದ್ದು, ಈ ಹಿನ್ನಲೆ ಕಳೆದ ಭಾರಿ ಸ್ಪರ್ಧಿಸಿದ್ದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಕಾಂಗ್ರೆಸ್ ಪಕ್ಷದ ಟಿಕೆಟ್ ಗೆ ಕೆಪಿಸಿಸಿಗೆ ಅರ್ಜಿ ಹಾಕುತ್ತೇನೆ. ಆದರೆ, ಪಕ್ಷದ ಪ್ರಾಮಾಣಿಕನಾದ ನಾನು ಯಾಕೆ ಎರಡು ಲಕ್ಷ ರೂಪಾಯಿ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.
ರಾಜ್ಯದಲ್ಲಿರುವುದು ಶೇಕಡಾ 40 ಕಮೀಷನ್ ಸರ್ಕಾರ. ಲೂಟಿಕೋರ ಸರ್ಕಾರ ಜನ ಸಾಮಾನ್ಯ ಹೊರೆಯಾಗಿದೆ. ಇಂಥ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕೆಂಬ ಸಂಕಲ್ಪ ತೊಟ್ಟು ಪ್ರತಿಭಟನೆ ನಡೆಸುತ್ತಿದ್ದೇವೆ. ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದಿಂದ ಜನರು ಬೇಸತ್ತಿದ್ದಾರೆ. ದಾವಣಗೆರೆ ಹಾಗೂ ಬೆಂಗಳೂರಿನಲ್ಲಿ 40% ಕಮೀಷನ್ ಜೋರಾಗಿದೆ ಎಂದು ಕಿಡಿಕಾರಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ ಮಂಜಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.