ದಾವಣಗೆರೆ: ಎಸ್ಪಿಯನ್ನು ನಾಯಿಗೆ ಹೋಲಿಸಿ ನಿಂದಿಸಿದ ಹರಿಹರ ಶಾಸಕ ಬಿ.ಪಿ. ಹರೀಶ್ ಡಾಬರ್‌ಮನ್ ನಾಯಿಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರಾದವರು ತಮ್ಮ ಸ್ಥಾನದ ಘನತೆ, ಗೌರವ ಅರಿತು ನಡೆದುಕೊಳ್ಳಬೇಕು. ಜಿಲ್ಲಾ ಮಟ್ಟದ ಒಳ್ಳೆ ಅಧಿಕಾರಿಗಳು ಇದ್ದಾರೆ. ಅಗವರ ವಿರುದ್ಧ ರೀತಿ-ನೀತಿ ಬಿಟ್ಟು ಮಾತನಾಡಬಾರದು ಎಂದರು.
ಸಮಾಜದಲ್ಲಿ ಶಾಂತಿ ನೆಲೆಸುವುದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ. ದಾದಾಗಿರಿ ಮಾಡುವುದು, ಬಾಯಿಗೆ ಬಂದಂತೆ ಮಾತನಾಡುವುದು ಅವರಿಗೆ ಸಾಮಾನ್ಯವಾಗಿದೆ. ಜನ ಇವರನ್ನು ಶಾಸಕರಾಗಿ ಸ್ವೀಕರಿಸಲು ಇಷ್ಟಪಡಲ್ಲ ಎಂದರು.
ಶಾಸಕ ಬಿ.ಪಿ.ಹರೀಶ್ ಏನು ಹೇಳಿದ್ರೂ…?
ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್, ಶಾಸಕರಿಗೆ ಬೆಲೆಯೇ ಕೊಡುವುದಿಲ್ಲ. ಶಾಸಕರು ಸಭೆಯಲ್ಲಿ ಇದ್ದರೆ ಮುಖ ತಿರುಗಿಸಿ ಕೂರುತ್ತಾರೆ. ಗಂಟೆಗಟ್ಟಲೆ ಶಾಮನೂರು ಮನೆಯ ಬಾಗಿಲು ಕಾಯುತ್ತಾರೆ. ಎಸ್ಪಿ ಶಾಮನೂರು ಕುಟುಂಬದ ಪೊಮೆರಿಯನ್ ನಾಯಿಯಂತೆ ವರ್ತಿಸುತ್ತಾರೆ. ಇವರಿಗೆ ಅಧಿಕಾರದಲ್ಲಿರುವವರು ಮಾತ್ರ ಮುಖ್ಯವಾಗಿ ಕಾಣುತ್ತಾರೆ ಎನ್ನಿಸುತ್ತದೆ. ಎಲ್ಲಾ ಜನಪ್ರತಿನಿಧಿಗಳನ್ನು ಸಮಾನವಾಗಿ ಕಾಣುವ ದೃಷ್ಟಿಕೋನ ಇಲ್ಲ. ಈ ಅಧಿಕಾರ ತಾತ್ಕಾಲಿಕ ಅನ್ನುವುದನ್ನು ಎಸ್ಪಿ ಅರಿತುಕೊಳ್ಳಬೇಕು ಎಂದು ಟೀಕಿಸಿದ್ದರು.