Connect with us

Dvgsuddi Kannada | online news portal | Kannada news online

ದಾವಣಗೆರೆ: ಸಣ್ಣ, ಅತಿ ಸಣ್ಣ ರೈತರಿಂದ ಪಾಲಿ ಹೌಸ್ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

playhouse

ದಾವಣಗೆರೆ

ದಾವಣಗೆರೆ: ಸಣ್ಣ, ಅತಿ ಸಣ್ಣ ರೈತರಿಂದ ಪಾಲಿ ಹೌಸ್ ಯೋಜನೆ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಸಣ್ಣ, ಅತಿ ಸಣ್ಣ ರೈತರಿಗೆ ಪಾಲಿ ಹೌಸ್ (Polyhouse Farming) ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಪಂಗಡದ ರೈತರಿಗೆ 2018-19ನೇ ಸಾಲಿನ ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮದಡಿ ಪಾಲಿ ಹೌಸ್ , ನೆರಳು ಪರದೆ ಕಾರ್ಯಕ್ರಮಕ್ಕೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

  • ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಯೋಜನೆ ಅನುಷ್ಠಾನ
  • ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಯೋಜನೆ
  • ನೀರಾವರಿ ಸೌಲಭ್ಯ ಹೊಂದಿರದವರು ಅರ್ಹ ಫಲಾನುಭವಿಗಳು

ರೂ.2,11,000/- ಗಳನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ದಾವಣಗೆರೆ ರವರ ಹೆಸರಿನಲ್ಲಿ ಡಿ.ಡಿ. ಮೂಲಕ ಫಲಾನುಭವಿ ವಂತಿಕೆ ಭರಿಸಲು ಸಿದ್ಧರಿರುವ ಆಸಕ್ತ ಅರ್ಜಿದಾರಿಂದ ಇದೇ ಮೇ.23 ರ ಒಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಕೊಠಡಿ ಸಂಖ್ಯೆ:45, ಡಿ.ಸಿ ಕಚೇರಿ, ದಾವಣಗೆರೆ, ಇಲ್ಲಿ ಅರ್ಜಿಯನ್ನು ಪಡೆಯಬಹುದು.

ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಸಣ್ಣ ಮತ್ತು ಅತಿ ಸಣ್ಣ ರೈತರಾಗಿ, ನೀರಾವರಿ ಸೌಲಭ್ಯ ಹೊಂದಿರಬೇಕು, ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು, ವಿದ್ಯುತ್ ಮಾರ್ಗ, ಸಂಪರ್ಕ ಹೊಂದಿರುವ ಕುರಿತು ಮಾಹಿತಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ದಾವಣಗೆರೆ ರವರ ಹೆಸರಿನಲ್ಲಿ ರೂ.2,11,000/-ಗಳನ್ನು ಡಿ.ಡಿ ಪಾವತಿಸಿದ ಚಲನ್, ಫಲಾನುಭವಿಯ ಹೆಸರಿನಲ್ಲಿರುವ ಪ್ರಸಕ್ತ ಸಾಲಿನ ಪಹಣಿ ಹೊಂದಿರಬೇಕು.

ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು, ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ಮುಚ್ಚಳಿಕೆ ಪತ್ರ ನೀಡಬೇಕು, ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ಯಾವುದೇ ಇಲಾಖೆ ನಿಗಮದಿಂದ ಈ ಹಿಂದೆ ಯಾವುದೇ ಯೋಜನೆಯಡಿ ಸೌಲಭ್ಯವನ್ನು ಪಡೆದಿರಬಾರದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top