ದಾವಣಗೆರೆ: ಸಾರ್ವಜನಿಕರ ಕಳುವಾದ, ಸುಲಿಗೆ ಮಾಡಿದ ಮೊಬೈಲ್ ಗಳನ್ನು ನೂತನ CEIR ವೆಬ್ ಪೋರ್ಟಲ್ ಮೂಲಕ ಪತ್ತೆಯಾದ ಸುಮಾರು 20,00,000 ರೂಗಳ ಮೌಲ್ಯದ ವಿವಿಧ ಕಂಪನಿಯ ಒಟ್ಟು130 ಮೊಬೈಲ್‌ಗಳನ್ನು ಜಿಲ್ಲಾ ಪೊಲೀಸರು ವಾರಸುದಾರರಿಗೆ ಹಿಂತಿರುಗಿಸಲಾಯಿತು.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್ ಪಿ ಉಮಾ ಪ್ರಶಾಂತ್ ಅಧ್ಯಕ್ಷತೆಯಲ್ಲಿ CEIR ಪೋರ್ಟಲ್ ಮೂಲಕ ಪತ್ತೆಯಾದ ಮೋಬೈಲ್‌ಗಳನ್ನು ವಾರಸುದಾರರಿಗೆ ಹಿಂದಿರುಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದಾವಣಗೆರೆ ಜಿಲ್ಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡವರು ಕೂಡಲೇ ನೂತನ CEIR (Central Equipment Identity Register) ಪೋರ್ಟಲ್ ( ಕಳುವಾದ, ಸುಲಿಗೆಯಾದ, ಕಾಣೆಯಾದ ಮೊಬೈಲ್ ಗಳ ಬ್ಲಾಕ್ ಮಾಡಲು ಕೇಂದ್ರ ಟೆಲಿ ಕಮ್ಯುನಿಕೇಶನ್ ಇಲಾಖೆಯಿಂದ ಜಾರಿಗೆ ತಂದಿರುವ ನೂತನ ವ್ಯವಸ್ಥೆ ) ಗೆ ಭೇಟಿ ನೀಡಿ ತಮ್ಮ ಮೊಬೈಲ್‌ನ ಸಂಪೂರ್ಣ ಮಾಹಿತಿ ನೀಡಿ ನೋಂದಾಯಿಸಿ ತಮ್ಮ ಮೊಬೈಲ್ ಅನ್ನು ಬ್ಲಾಕ್ ಮಾಡಿದ್ದು, ನಂತರ ಸದರಿ ಮೊಬೈಲ್ ಗಳಲ್ಲಿ ಹಲವು ಮೊಬೈಲ್‌ಗಳನ್ನು ದಾವಣಗೆರೆ ಪೊಲೀಸರು ನೂತನ ವೆಬ್ ಪೋರ್ಟಲ್ ಮೂಲಕ ಪತ್ತೆ ಮಾಡಲಾಗಿದೆ.
ನೂತನ CEIR ವೆಬ್ ಪೋರ್ಟಲ್ ಮೂಲಕ ಪತ್ತೆಯಾದ ಸುಮಾರು 20,00,000/- ರೂಗಳ ಮೌಲ್ಯದ ವಿವಿಧ ಕಂಪನಿಯ ಒಟ್ಟು 130 ಮೊಬೈಲ್‌ಗಳನ್ನು ಪೊಲೀಸ್ ಅಧೀಕ್ಷಕರವರು ಮೋಬೈಲ್ ವಾರಸುದಾರರಿಗೆ ಹಿಂದಿರುಗಿಸಿದರು. ದಾವಣಗೆರೆ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಿಂದ ಇಲ್ಲಿಯವರೆಗೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದುಕೊಂಡವರು ಕೂಡಲೇ ನೂತನ #CEIR ಪೋರ್ಟಲ್‌ಗೆ ಬೇಟಿ ನೀಡಿ ತಮ್ಮ ಮೊಬೈಲ್‌ನ ಸಂಪೂರ್ಣ ಮಾಹಿತಿ ನೀಡಿ ನೊಂದಾಯಿಸಿದ್ದರು.
CEIR ಪೋರ್ಟಲ್ ಮೂಲಕ 3290 ಮೊಬೈಲ್ ಗಳನ್ನು ಬ್ಲಾಕ್ ಮಾಡಲಾಗಿದ್ದು, ಅವುಗಳಲ್ಲಿ ಈಗಾಗಲೇ 390 ಮೊಬೈಲ್ ಗಳನ್ನು ಮೊಬೈಲ್ ವಾರಸುದಾರರಿಗೆ ಹಿಂತಿರುಗಿಸಲಾಗಿದ್ದು, ಈ ದಿನ 130 ವಿವಿಧ ಕಂಪನಿಯ ಮೊಬೈಲ್ ಗಳನ್ನು ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರು ಮೊಬೈಲ್ ವಾರಸುದಾರರಿಗೆ ಹಿಂದಿರುಗಿಸಿದರು. ಈವರೆಗೆ ಒಟ್ಟು 520 ಮೊಬೈಲ್‌ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿರುತ್ತದೆ.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ವಿಜಯಕುಮಾರ ಎಂ ಸಂತೋಷ್ ರವರು, ಸಿಇಎನ್ ಪೊಲೀಸ್ ನಿರೀಕ್ಷಕರಾದ ಶ್ರೀ ಪಿ ಪ್ರಸಾದ್ ರವರು, ಜಿಲ್ಲಾ ಪೊಲೀಸ್ ಕಛೇರಿಯ ಪೊಲೀಸ್ ನಿರೀಕ್ಷಕರಾದ ಶ್ರೀ ರುದ್ರಪ್ಪ ರವರು ಹಾಗೂ ಪೊಲೀಸ್ ಸಿಬ್ಬಂದಿಗಳು ಹಾಗೂ ಮೊಬೈಲ್ ವಾರಸುದಾರರು ಉಪಸ್ಥಿತರಿದ್ದರು. ಸಾರ್ವಜನಿಕರು ತಮ್ಮ ಮೊಬೈಲ್ ಕಳುವಾದಲ್ಲಿ/ ಸುಲಿಗೆಯಾಗಿದ್ದಲ್ಲಿ/ ಕಾಣೆಯಾಗಿದ್ದಲ್ಲಿ ಕೂಡಲೇ ನೂತನ ವೆಬ್ ಪೋರ್ಟಲ್ ಗೆ ಬೇಟಿ ನೀಡಿ ನೋಂದಾಯಿಸಲು ಹಾಗೂ ಇದರ ಸದುಪಯೋಗ ಪಡೆಯಲು ಈ ಮೂಲಕ ತಿಳಿಸಲಾಗಿದೆ.



