ದಾವಣಗೆರೆ: ಸರಸ್ವತಿ ಮತ್ತು ವಿವೇಕಾನಂದ 11 ಕೆ.ವಿ. ಫೀಡರ್‍ಗಳಲ್ಲಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.06 ರಂದು ಸರಸ್ವತಿ ಫೀಡರ್ ವ್ಯಾಪ್ತಿಯ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮ್ಮಣ್ಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು. ಹಾಗೂ ವಿವೇಕಾನಂದ ಫೀಡರ್ ವ್ಯಾಪ್ತಿಯ ಸ್ವಾಮಿ ವಿವೇಕಾನಂದ ಬಡಾವಣೆ, ಆಂಜನೇಯ ಬಡಾವಣೆ 16, 17, 18 & 19 ನೇ ಕ್ರಾಸ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ .
ಇನ್ನು ದಾವಣಗೆರೆ ಸ್ಮಾರ್ಟ್‍ಸಿಟಿ ಲಿಮಿಟೆಡ್ ಯೋಜನೆಯಡಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಬಿ.ಟಿ ಮತ್ತು ಎಲ್‍ಎಫ್1 11ಕೆವಿ ಮಾರ್ಗದಲ್ಲಿ ಬರುವ ಪ್ರದೇಶಗಳಲ್ಲಿ ಫೆ.6 ರ ಶನಿವಾರ ಬೆಳಗ್ಗೆ 10 ರಿಂದ ಸಂಜೆ 4.30 ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಎಫ್-04-ಬಿ.ಟಿ, 11ಕೆವಿ ಮಾರ್ಗದಲ್ಲಿ ಬರುವ ರೆಹಮಾನ್‍ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್ ರಸ್ತೆ) ಸುತ್ತಮುತ್ತ ಸೇರಿದಂತೆ ಇತರೆ ಪ್ರದೇಶಗಳು. ಎಫ್-11-ಎಲ್‍ಎಫ್1, 11ಕೆವಿ ಮಾರ್ಗದಲ್ಲಿ ಬರುವ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರರಸ್ತೆ, ಕೆಆರ್‍ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೇಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೆÇೀಸ್ಟ್‍ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



