ದಾವಣಗೆರೆ: 220 ಕೆ.ವಿ. ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ ಇಂಡಸ್ಟ್ರಿಯಲ್ 24*7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಹಾಗೂ 66/11 ಕೆ.ವಿ ವಿ.ವಿ. ಕೇಂದ್ರ ಯರಗುಂಟೆಯಿಂದ ಹೊರಡುವ ಕರೂರು ಇಂಡಸ್ಟ್ರಿಯಲ್ ಫೀಡರ್ ನಲ್ಲಿ ಸ್ಮಾರ್ಟ್‍ಸಿಟಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆ.07 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕರೂರು ಇಂಡಸ್ಟ್ರಿಯಲ್ ಫೀಡರ್ ನ ವ್ಯಾಪ್ತಿಯ ಕರೂರು ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾಧಿಕಾರಿಗಳ ಕಛೇರಿ, ಜಿ.ಎಮ್.ಐ.ಟಿ ಹಿಂಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಸ್ ಆರ್ ಎಸ್ ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ. ರವೀಂದ್ರನಾಥ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.