ದಾವಣಗೆರೆ: ಇಂದು ನಗರದ ಸ್ವಿಮ್ಮಿಂಗ್ ಫೂಲ್ ಮತ್ತು ವಿವೇಕಾನಂದ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಮತ್ತು ಸ್ವೀಕರಣಾ ಕೇಂದ್ರದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸ್ವಿಮ್ಮಿಂಗ್ ಫೂಲ್ ಫೀಡರ್ ವ್ಯಾಪ್ತಿಯ ಬಾಪೂಜಿ ಆಸ್ಪತ್ರೆ, ಡೆಂಟಲ್ ಕಾಲೇಜು ರಸ್ತೆ, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರಗೆ ಹಾಗೂ
ವಿವೇಕಾನಂದ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯ 1ನೇ ಕ್ರಾಸ್ ನಿಂದ 8ನೇ ಕ್ರಾಸ್ ವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 04 ಗಂಟೆಯವರಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



