Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರದ ಬಸವೇಶ್ವರ, ಜಯನಗರ & ಇ.ಎಸ್.ಐ ಫೀಡರ್ ಗಳಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜ.07 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಬಸವೇಶ್ವರ ಫೀಡರ್‍ನ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು. ಜಯನಗರ ಫೀಡರ್‍ನ ವ್ಯಾಪ್ತಿಯ ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಸುತ್ತ ಮುತ್ತಲಿನ ಪ್ರದೇಶಗಳು, ಇ.ಎಸ್.ಐ ಫೀಡರ್‍ನ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});