ದಾವಣಗೆರೆ: ದಾವಣಗೆರೆ ತಾಲ್ಲೂಕು ವ್ಯಾಪ್ತಿಯ 66/11 ಕೆ.ವಿ. ಆವರಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.20 ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಆರ್.ಎಂ.ಸಿ ಲಿಂಕ್ ರಸ್ತೆ, ಬಿ.ಟಿ ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪೆನ ತೋಟ, ಆನೆಕೊಂಡ, ಎಲ್.ಬಿ.ಎಸ್ ನಗರ ಟಿ.ಸಿ ಲೇಔಟ್, ಕೆ.ಆರ್ ರಸ್ತೆ, ಆನೆಕೊಂಡ, ಐನಳ್ಳಿ ಕಾಂಪೌಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್ ನಗರ, ಕಬ್ಬೂರು, ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.