Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಆವರಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.16 ರ ಶುಕ್ರವಾರದಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಾದ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖರಪ್ಪ ನಗರ, ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಅಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹೊನ್ನೂರು, ಹೊನ್ನೂರು ಗೊಲ್ಲರಹಟ್ಟಿ, ವಡ್ಡಿನಹಳ್ಳಿ, ಹೆಚ್.ಕಲಪನಹಳ್ಳಿ, ಆಂಜನೇಯ ಕಾಟನ್ ಮಿಲ್, ಮಲ್ಲಶೆಟ್ಟಿಹಳ್ಳಿ, ಕರಿಲಕ್ಕೆನಹಳ್ಳಿ, ಚಟ್ಟೋಬನಹಳ್ಳಿ, ಬಸಾಪುರ, ಹಳೆಚಿಕ್ಕನಹಳ್ಳಿ, ಹೊಸಚಿಕ್ಕನಹಳ್ಳಿ, ಆವರಗೆರೆ, ಐಗೂರು, ಐಗೂರು ಗೊಲ್ಲರಹಟ್ಟಿ, ಲಿಂಗದಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಬೆಸ್ಕಾಂ ಜಗಳೂರು ಉಪವಿಭಾಗ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆಗಳ ಕುರಿತು ತಕ್ಷಣ ಪರಿಹಾರ ನೀಡಲು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 11 ಗಂಟೆಗೆ ಆಂದೋಲನ ರೀತಿಯಲ್ಲಿ ಘಟಕ-2 ಜಗಳೂರು ಶಾಖೆಯ ದೇವಿಪುರ ಗ್ರಾಮದಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಹಾಗೂ ಅದೇ ದಿನ ಮಧ್ಯಾಹ್ನ 03 ಗಂಟೆಗೆ ಜಗಳೂರು ಉಪವಿಭಾಗೀಯ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ಆದ್ದರಿಂದ ಸಭೆಯಲ್ಲಿ ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿತ ಯಾವುದೇ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಜಗಳೂರು ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top