ದಾವಣಗೆರೆ; 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್‍ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಚಿಕ್ಕಮಣಿ ಲೇಔಟ್, ಜೀವನ್‍ಭೀಮ ನಗರ, ಸರಸ್ವತಿ ನಗರ, ಜಯನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಜಗಳೂರು ಎಂ.ಯು.ಎಸ್.ಎಸ್ ನಿಂದ ಜಗಳೂರು ಕೆರೆಯವರೆಗೆ ಲಿಂಕ್‍ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 6 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ದೇವಿಕೆರೆ, ರಂಗಾಪುರ, ಮತ್ತು ಜಗಳೂರು ಟೌನ್ ಫೀಡರ್‍ಗಳ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.