ದಾವಣಗೆರೆ: ದಾವಣಗೆರೆಯಿಂದ ಹೊರಡುವ 66/11 ಕೆ.ವಿ.ವಿ.ವಿ. ಫೀಡರ್‍ಗಳಲ್ಲಿ ಮಹಾನಗರ ಪಾಲಿಕೆ ವತಿಯಿಂದ ಡ್ರೇನೆಜ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ.30 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಮೌನೇಶ್ವರ ಫೀಡರ್ ವ್ಯಾಪ್ತಿಯ ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರಬಡಾವಣೆ, ಹಾಗೂ ಇ.ಎಸ್.ಐ .ಆಸ್ಪತ್ರೆ, ಕೆ.ಟಿ.ಜೆ ನಗರ ಪೊಲೀಸ್ ಠಾಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು. ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುಗಾರ್ಂಬಿಕದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.