ದಾವಣಗೆರೆ: 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‌ನಲ್ಲಿ ಹೆಚ್ಚುವರಿ ಕಂಬಗಳನ್ನು ಅಳವಡಿಸಿಕೊಂಡು ಎಲ್.ಟಿ ಮಾರ್ಗವನ್ನು ವಿಸ್ತರಣೆ ಮಾಡಲು ತುರ್ತುಕಾರ್ಯ ಹಮ್ಮಿಕೊಂಡಿರುವುದರಿಂದ ಆ.6 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-12 ಬಸವೇಶ್ವರ ಫೀಡರ್, ಎಸ್.ಎಸ್. ಬಡಾವಣೆ, ಬಿ.ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.