ದಾವಣಗೆರೆ; ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಂ.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್, ಎಸ್ ಲೇಔಟ್ ಎ ಬ್ಲಾಕ್, ಕುವೇಂಪು ನಗರ, ಎಸ್.ಎಸ್ ಮಹಲ್, ಮಾವಿನತೊಪ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅತ್ತೀಗೆರೆ ವಿದ್ಯುತ್ ಮಾರ್ಗಗಳಲ್ಲಿ ಅಡಚಣೆ ಉಂಟಾಗುವುದರಿಂದ ನವಂಬರ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅತ್ತೀಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.