ದಾವಣಗೆರೆ: 66/11 ಕೆ.ವಿ. ಕುಕ್ಕವಾಡ ಮತ್ತು ಶ್ಯಾಗಲೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಾಹಣೆ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ, ಹೂವಿನಮಡು ಗ್ರಾಮಗಳು ಹಾಗೂ ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಬಿಳಿಚೋಡು ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಫೀಡರ್‍ಗಳ ಜಂಗಲ್ ಕಟಿಂಗ್ ಮತ್ತು ಫೀಡರ್‍ಗಳ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 21 ಮತ್ತು 22 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳ ಎನ್‍ಜೆವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



