ದಾವಣಗೆರೆ: 66/11 ಕೆವಿ ಜಗಳೂರು ಮತ್ತು ಹೆಚ್ ಎಂ ಹೊಳೆ ವಿ.ವಿ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ವಿ.ವಿ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಎನ್.ಜೆ.ವೈ & ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಧುನಿಕ ಹೈನುಗಾರಿಕೆ ತರಬೇತಿ
ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಡಿಸೆಂಬರ್ 30 ಮತ್ತು 31 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಾವಣಗೆರೆ: ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
ವಿಶ್ವ ಮಾನವ ದಿನಾಚರಣೆ
ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ತಿಳಿಸಿದ್ದಾರೆ.



