ದಾವಣಗೆರೆ: ವಿಜಯನಗರ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಇಂದು (ಜ.20) ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.
ಎಫ್08-ವಿಜಯನಗರ ಫೀಡರ್: ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್‍ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್‍ಪಿಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.



