ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (Pradhan Mantri Fasal Bima Yojana) ಯೋಜನೆಗೆ ಒಳಪಡುವ ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯನ್ನು ಪಾವತಿಸಲು ಜುಲೈ 31 ಹಾಗೂ ಸೂರ್ಯಾಕಾಂತಿ ಬೆಳೆಗೆ ಆಗಸ್ಟ್ 16 ಕೊನೆಯದಿನವಾಗಿರುತ್ತದೆ.
ಬೆಳೆವಿಮೆ ಮಾಡಲು ಇಚ್ಛಿಸಿದ ಸಾಲ ಪಡೆದಂತಹ ರೈತರು ಬೆಳೆವಿಮೆ ಮಾಡಿಸಲು ನಿಗದಿಪಡಿಸಿರುವ ಅಂತಿಮ ದಿನಾಂಕಕ್ಕಿಂತ 7 ದಿನದ ಮುಂಚಿತವಾಗಿ ಸಂಬಂಧಪಟ್ಟ ಬ್ಯಾಂಕಿಗೆ ಆಪ್ಟಿಂಗ್-ಔಟ್ ಎಂಬ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ, ಬ್ಯಾಂಕುಗಳನ್ನು, ಸಾರ್ವಜನಿಕ ಸೇವಾ ಕೇಂದ್ರ ಅಥವಾ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಜಂಟಿ ಕೃಷಿ ನಿರ್ದೇಶಕ ಜಿಯಾವುಲ್ಲಾ ತಿಳಿಸಿದ್ದಾರೆ.



