ದಾವಣಗೆರೆ: ಭ್ರಷ್ಟಾಚಾರದಲ್ಲಿ ಕೇಸನಲ್ಲಿ ಸಿಲುಕಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೂಡಲೇ ಬಂಧಿಸಬೇಕು. ಈ ಬಾರಿಯ ಜನತಾ ನ್ಯಾಯಾಲದಲ್ಲಿ ಸೋಲಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಡಾಳ್ ವಿರೂಪಾಕ್ಷಪನಿಗೆ ಕೋರ್ಟ್ ಜಾಮೀನು ನೀಡಿದೆ. ಆದರೆ ಜನತಾ ನ್ಯಾಯಾಲಯದಲ್ಲಿ ಆತನಿಗೆ ಶಿಕ್ಷೆ ಆಗಬೇಕು, ಭ್ರಷ್ಟ ವಿರೂಪಾಕ್ಷಪ್ಪನನ್ನು ಚುನಾವಣೆಯಲ್ಲಿ ಸೋಲಿಸಬೇಕಿದೆ ಎಂದರು.
ಏಪ್ರಿಲ್ ತಿಂಗಳ ಅಂತ್ಯಕ್ಕೆ ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ , ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಪ್ರತಿ ಕೆಲಸಗಳಿಗೂ ಲಂಚ ಕೊಡಬೇಕಾದ ಅನಿವಾರ್ಯತೆಯಿದೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಬಿಜೆಪಿಯವರು ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿದ್ದಾರೆ. ಬೇರೆ ಯಾರೇ ಆಗಿದ್ದರೂ ರಾಜೀನಾಮೆ ಕೊಟ್ಟು ಹೋಗುತ್ತಿದ್ದರು, ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಲಜ್ಜೆಗೆಟ್ಟವರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.



