Connect with us

Dvgsuddi Kannada | online news portal | Kannada news online

ದಾವಣಗೆರೆ: ಖಾಸಗಿ ಶಾಲೆಗಳು ನಿಗದಿಪಡಿಸಿದ ಶುಲ್ಕದ ವಿವರ ಸೂಚನಾ ಫಲಕದಲ್ಲಿ ಪ್ರಕಟಿಸಲು ಸೂಚನೆ; ತಪ್ಪಿದಲ್ಲಿ ಕಾನೂನು‌ ಕ್ರಮ

private school

ದಾವಣಗೆರೆ

ದಾವಣಗೆರೆ: ಖಾಸಗಿ ಶಾಲೆಗಳು ನಿಗದಿಪಡಿಸಿದ ಶುಲ್ಕದ ವಿವರ ಸೂಚನಾ ಫಲಕದಲ್ಲಿ ಪ್ರಕಟಿಸಲು ಸೂಚನೆ; ತಪ್ಪಿದಲ್ಲಿ ಕಾನೂನು‌ ಕ್ರಮ

ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ 2025-26ನೇ ಸಾಲಿಗೆ ಪ್ರವೇಶಾತಿ ಸಂದರ್ಭದಲ್ಲಿ ಪಡೆಯುವ ಶುಲ್ಕವನ್ನು ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ ಕರ್ನಾಟಕ ಎಜುಕೇಷನ್ ಇನ್‌ಸ್ಟ್ರಕ್ಷನ್ ರೂಲ್ಸ್-1985 ನಿಯಮಾನುಸಾರ ಮಾನ್ಯತೆ ಪಡೆದಿರುವ ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಸಾರ್ವಜನಿಕರಿಗೆ, ಪೋಷಕರಿಗೆ ಗಮನಕ್ಕೆ ಬರುವಂತೆ ಇಲಾಖೆ ಜಾಲತಾಣದಲ್ಲಿ ಹಾಗೂ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ಒಂದು ವೇಳೆ ಕ್ರಮವಹಿಸದಿದ್ದ ಪಕ್ಷದಲ್ಲಿ ಆಡಳಿತ ಮಂಡಳಿ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದಿಂದ ಸೂಕ್ತ ಕ್ರಮಕೈಗೊಳ್ಳಲಾಗುವುದು.

ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು, ಖಾಸಗಿ ಅನುದಾನ ರಹಿತ ಶಾಲೆಗಳು ಇಲಾಖೆ ನಿಯಮಗಳನ್ನು ಪಾಲಿಸುತ್ತಿರುವ ಕುರಿತು ಪರಿಶೀಲಿಸಬೇಕು. ಕ್ರಮವಹಿಸದ ಶಾಲೆಗಳ ಮಾಹಿತಿಯನ್ನು ಇಲಾಖೆ ಗಮನಕ್ಕೆ ತರಬೇಕೆಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top