Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಪಿಎಸ್ ಐ ಹುದ್ದೆಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಪಿಎಸ್ ಐ ಹುದ್ದೆಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿಯಿಂದ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಮಾದರಿ ವೃತ್ತಿ ಕೇಂದ್ರ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ವತಿಯಿಂದ ಸೆ.07 ರಿಂದ 17 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, 2ನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಆಡಳಿತ ಭವನ, ಕರೂರು ಇಂಡಸ್ಟ್ರಿಯಲ್ ಏರಿಯಾ, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿ ಉಚಿತ ಪರೀಕ್ಷಾಪೂರ್ವ ತರಬೇತಿಯನ್ನು ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಛಿಸುವ ಅಭ್ಯರ್ಥಿಗಳು ಸೆ.06 ಸಂಜೆ 5 ಗಂಟೆ ಒಳಗೆ ಈ ಕಚೇರಿಯಲ್ಲಿ ನೋಂದಣಿ ಮಾಡತಕ್ಕದ್ದು, ನೋಂದಾಯಿತ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಈ ತರಬೇತಿಯು ದಿನಾಂಕ: 07-09-2022ರ ಬೆಳಿಗ್ಗೆ 10:00 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ (ಪ್ರಯಾಣ ಭತ್ಯೆ ಹಾಗೂ ಊಟದ ವ್ಯವಸ್ಥೆ ಇರುವುದಿಲ್ಲ) ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಹಾಗೂ ನೋಂದಣಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08192-259446 ಹಾಗೂ ಮೊಬೈಲ್ ಸಂಖ್ಯೆ:7406323294 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top