Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.1ರಿಂದ ಜಿಲ್ಲೆಯ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಸಕಲ ಸಿದ್ಧತೆಗೆ ಡಿಸಿ ಸೂಚನೆ

ದಾವಣಗೆರೆ

ದಾವಣಗೆರೆ: ಮಾ.1ರಿಂದ ಜಿಲ್ಲೆಯ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ; ಸಕಲ ಸಿದ್ಧತೆಗೆ ಡಿಸಿ ಸೂಚನೆ

ದಾವಣಗೆರೆ: ಮಾರ್ಚ್ 1 ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.1 ರಿಂದ 22 ರವರೆಗೆ ಜಿಲ್ಲೆಯಲ್ಲಿ ಒಟ್ಟು 33 ಕೇಂದ್ರಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಪರೀಕ್ಷಾ ಪೂರ್ವ ಸಿದ್ದತಾ ಕುರಿತು ಏರ್ಪಡಿಸಲಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಕೊರತೆ ಇಲ್ಲದೆ ಪರೀಕ್ಷೆ ಬರೆಯಲು ಆಸನದ ವ್ಯವಸ್ಥೆ, ನೀರು, ಗಾಳಿ, ಬೆಳಕಿನ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಬರೆಯಲು ಎಲ್ಲಾ ಪೂರಕ ವಾತಾವರಣ ಕಲ್ಪಿಸಬೇಕೆಂದು ಸೂಚನೆ ನೀಡಿದರು.

ಮಾರ್ಚ್ 1 ರಿಂದ ಪರೀಕ್ಷೆ ಆರಂಭವಾಗಿ ಮಾ.22 ರ ವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 18 ಕೇಂದ್ರಗಳು, ಹರಿಹರ 4, ಜಗಳೂರು 3, ಚನ್ನಗಿರಿ 5, ಹೊನ್ನಾಳಿ 3 ಕೇಂದ್ರಗಳು ಸೇರಿದಂತೆ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ 21088 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸ ವಿದ್ಯಾರ್ಥಿಗಳು 19644. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 422. ಖಾಸಗಿ ವಿದ್ಯಾರ್ಥಿಗಳ ಸಂಖ್ಯೆ 1022. ಒಟ್ಟಾರೆ ಪರೀಕ್ಷೆ ಬರೆಯುವವರಲ್ಲಿ 9980 ಗಂಡು, 11108 ಹೆಣ್ಣು ಮಕ್ಕಳು ಇದ್ದಾರೆ. ಪರೀಕ್ಷಾ ಕೇಂದ್ರದೊಳಗೆ ಕರ್ತವ್ಯ ನಿರತ ಸಿಬ್ಬಂದಿ ಹೊರತುಪಡಿಸಿ ಇತರೆ ಯಾರಿಗೂ ಪ್ರವೇಶ ಇರುವುದಿಲ್ಲ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ : 33 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ವಹಿಸಲಾಗುವುದು.
ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ ಮಾತನಾಡಿ ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಗೆ ಗೈರಾಗಿದ್ದು ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮಾತಾನಾಡಿ, ಖಜಾನೆಗಳಿಂದ ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿ ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗುವುದು.

ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ಕಡ್ಡಾಯವಾಗಿ ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದರು.
ಜಿಲ್ಲಾ ವಿಶೇಷ ವಿಭಾಗದ ಪೊಲೀಸ್ ನಿರೀಕ್ಷಕರು ಇಮ್ರಾನ್ ಬೇಗ್, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ರಾಜಶೇಖರ್, ಡಯಟ್ ಉಪನಿರ್ದೇಶಕರಾದ ಗೀತಾ, ಖಜಾನೆ ಇಲಾಖೆಯ ಉಪನಿರ್ದೇಶಕಿ ಪ್ರಭಾವತಿ, ದಕ್ಷಿಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪುಪ್ಪಾವತಿ, ದಾವಣಗೆರೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top