Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.09 ರಿಂದ ಜಿಲ್ಲೆಯ 31 ಕೇಂದ್ರಗಲ್ಲಿ ಪಿಯುಸಿ ಪರೀಕ್ಷೆ; ಪಾರದರ್ಶಕ ಪರೀಕ್ಷೆಗೆ ಸೂಚನೆ; ಪರೀಕ್ಷೆ ಕೇಂದ್ರ ಸುತ್ತ ನಿಷೇಧ

ದಾವಣಗೆರೆ

ದಾವಣಗೆರೆ: ಮಾ.09 ರಿಂದ ಜಿಲ್ಲೆಯ 31 ಕೇಂದ್ರಗಲ್ಲಿ ಪಿಯುಸಿ ಪರೀಕ್ಷೆ; ಪಾರದರ್ಶಕ ಪರೀಕ್ಷೆಗೆ ಸೂಚನೆ; ಪರೀಕ್ಷೆ ಕೇಂದ್ರ ಸುತ್ತ ನಿಷೇಧ

ದಾವಣಗೆರೆ; ಮಾ.09ರಿಂದ 29 ರವರೆಗೆ ನಡೆಯುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ನಿನ್ನೆ ದ್ವಿತೀಯ
ಪಿ.ಯು.ಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತೆ
ಗಳನ್ನು ಪರಿಶೀಲಿಸಿ, ಮಾತನಾಡಿದ ಅವರು, ಪದವಿ ಪೂರ್ವ ಶಿಕ್ಷಣ ಮಂಡಳಿಯ ಮಾರ್ಗ ಸೂಚಿಯಂತೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು. ಪರೀಕ್ಷೆ ನಿಯೋಜಿತ ಅಧಿಕಾರಿಗಳು ಸಮಯ ಪಾಲನೆ ಹಾಗೂ ಶಿಸ್ತಿನಿಂದ
ಕಾರ್ಯನಿರ್ವಹಿಸಬೇಕು ಎಂದರು.

ಪರೀಕ್ಷೆ ದಿನ ಖಜಾನೆಗಳಿಂದ ಪ್ರಶ್ನೆ ಪತ್ರಿಕೆ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಣೆ ಕುರಿತು ಹೆಚ್ಚಿನ ಜವಾಬ್ದಾರಿ ವಹಿಸಕೊಳ್ಳಬೇಕು. ಖಜಾನೆ ಅಧಿಕಾರಿಗಳು, ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳು ಕೊಠಡಿ ಮೇಲ್ವೆಚಾರ ಸಿಬ್ಬಂದಿಗಳು ಮೊಬೈಲ್ ಫೋನ್/ಇತರೆ
ವಿದ್ಯುನ್ಮಾನ ಆಧುನಿಕ ಉಪಕರಣಗಳ ಬಳಕೆ ನಿಷೇಧಿಸಿದೆ. ಕೊಠಡಿ ಒಳಗೆ ಯಾರೂ ವಿದ್ಯುನ್ಮಾನ ಉಪಕರಣಗಳನ್ನು
ತಗೆದುಕೊಂಡು ಹೋಗುವಂತಿಲ್ಲ ಹಾಗೂ ಪರೀಕ್ಷಾ ಕೇಂದ್ರ ಆವರಣದಲ್ಲಿ ಅನಾವಶ್ಯಕ ಓಡಾಟ ಪರೀಕ್ಷೆ ಕಾರ್ಯಕ್ಕೆ ಸಂಬಂಧಿಸದೆ ಇರುವ ವ್ಯಕ್ತಿಗಳ ಪ್ರವೇಶಕ್ಕೆ ನಿಷೇಧವಿದೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಸೂಚನೆ ನೀಡಿದರು. ಹಾಗೂ ಪರೀಕ್ಷ ಕೇಂದ್ರ ಸುತ್ತಲು ಸೆಕ್ಷನ್ 144 ರನ್ವಯ ನಿಷೇಧಾಜ್ಞೆ ಘೋಷಿಸಲಾಗುವುದು ಎಂದರು.

ಯಾವ ವಿಷಯದ ಪರೀಕ್ಷೆ ನಡೆಯುತ್ತಿದೆಯೋ ಆ ದಿನದಂದು ಅದೇ ವಿಷಯಕ್ಕೆ ಸಂಬಂಧಿಸಿದ ಉಪನ್ಯಾಸಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಕಾತಿ ಮಾಡಿಕೊಳ್ಳಬಾರದು ಹಾಗೂ ಎಲ್ಲಾ
ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಕ್ಷಕರು, ಪರೀಕ್ಷಾರ್ಥಿಗಳನ್ನು ಪೀಠೋಪಕರಣ ಇನ್ನಿತರ ಯಾವುದೇ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಾಲೆಗಳಿಂದ ನೆರವು ಪಡೆದುಕೊಳ್ಳಲು ಸೂಚಿಸಿದರು.

ಜಿಲ್ಲೆಯ ದಾವಣಗೆರೆ ತಾಲ್ಲೂಕಿನಲ್ಲಿ 17, ಹರಿಹರ ತಾಲ್ಲೂಕಿನಲ್ಲಿ 4, ಜಗಳೂರು ತಾಲ್ಲೂಕಿನಲ್ಲಿ 3, ಚನ್ನಗಿರಿ
ತಾಲ್ಲೂಕಿನಲ್ಲಿ 4, ಹೊನ್ನಾಳಿ ತಾಲ್ಲೂಕಿನಲ್ಲಿ 3 ಕೇಂದ್ರಗಳು ಒಳಗೊಂಡಂತೆ ಒಟ್ಟಾರೆ 31 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. 20445 ವಿದ್ಯಾರ್ಥಿಗಳು ನೊಂದಣಿ
17928 ಹೊಸ ವಿದ್ಯಾರ್ಥಿಗಳು, 2159 ಪುನರಾವರ್ತಿತ ವಿದ್ಯಾರ್ಥಿಗಳು, 358 ಖಾಸಗೀ ವಿದ್ಯಾರ್ಥಿಗಳು ಒಳಗೊಂಡಂತೆ ಒಟ್ಟಾರೆಯಾಗಿ ಜಿಲ್ಲೆಯ 20445
ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು
ನೊಂದಾಯಿಸಿಕೊಂಡಿದ್ದಾರೆ.

ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿ ಗಳನ್ನು ನಿಯೋಜಿಸಲಾಗುವುದು. ಖಜಾನೆಯಿಂದ ಪ್ರಶ್ನೆ ಪತ್ರಿಕೆ ರವಾನಿಸುವ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು. ಕುಡಿಯುವ ನೀರಿನ ವ್ಯವಸ್ಥೆ, ಆಯಾಯ ಪರೀಕ್ಷಾ ಕೊಠಡಿ ಒಳಗೆ ವ್ಯವಸ್ಥೆ ಮಾಡು ವುದು, ವಿದ್ಯಾರ್ಥಿಗಳು, ಸಿಬ್ಬಂದಿಗಳು ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ಹಾಗೂ ಕಾಲೇಜುಗಳಲ್ಲಿ ನಿಗದಿ
ಪಡಿಸಿದ ಸಮವಸ್ತ್ರ ಧರಿಸಿ ಹಾಜರಾಗಬೇಕು.

ಸಭೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಬಸವರಾಜ ಬಸರಗಿ, ಜಿಲ್ಲಾ ಖಜಾನೆ ಉಪನಿರ್ದೇಶಕಿ ಪ್ರಭಾವತಿ, ಡಿಡಿಪಿಐ ತಿಪ್ಪೇಶಪ್ಪ, ಡಿ.ಡಿ.ಪಿ.ಯು ಎಂ. ಶಿವರಾಜ್ ಹಾಗೂ ಜಿಲ್ಲಾ ಮತ್ತು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿಶೇಷ ಪ್ರಶ್ನೆ ಪತ್ರಿಕೆ ಪಾಲಕರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top