ದಾವಣಗೆರೆ: ಅಕಾಲಿಕವಾಗಿ ಸುರಿದ ಭಾರೀ ಮಳೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಸಂಪರ್ಕ ಸೇತುವೆ ಕೊಚ್ಚಿ ಹೋಗಿದೆ. ಸೋಮವಾರ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಪ್ರತಿ ಸಲ ಮಳೆ ಬಂದಾಗಲೂ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಗ್ರಾಮಸ್ಥರಿಗೆ ಸಂಪರ್ಕ ಇಲ್ಲದಂತಾಗುತ್ತಿದೆ. ಈ ಬಗ್ಗೆ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಗ್ರಾಮದ ಸುತ್ತಮುತ್ತಲಿನ ಭತ್ತ, ಕಬ್ಬು, ಎಲೆಬಳ್ಳಿ, ಅಡಿಕೆ ಬೆಳೆ ಅಪಾರ ಹಾನಿಯಾಗಿತ್ತು.