ದಾವಣಗೆರೆ: ಭಾರಿ ಮಳೆಯಿಂದಾಗಿ ಮನೆ ಗೋಡೆ ಕುಸಿದು ತೀವ್ರವಾಗಿ ಗಾಯಗೊಂಡಿದ್ದ ಹರಿಹರದ 4 ವರ್ಷದ ಮಗುವನ್ನು ದಾವಣಗೆರೆಯ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಿದ್ದು, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಆಸ್ಪತ್ರೆಗೆ ಭೇಟಿ ನೀಡಿ, ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿದರು.
ಹರಿಹರದ ಮೆಹಬೂಬ್ ನಗರದ ಮಗು ಆಯೇಷಾ ಮನೆ ಕುಸಿದು, ಗಂಭೀರವಾಗಿ ಗಾಯಗೊಂಡಿದೆ. ಮಗುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಸದೆ ಡಾ.ಪ್ರಭಾ ಆಸ್ಪತ್ರೆ ವೈದ್ಯರೊಂದಿಗೆ ಮಗುವಿನ ಆರೋಗ್ಯ, ಸ್ಥಿತಿಗತಿ ಬಗ್ಗೆ ವಿಚಾರಿಸಿದರು.



