ದಾವಣಗೆರೆ: ನಿನ್ನೆ ಸುರಿದ ಭಾರೀ ಮಳೆಗೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣವೆಬಿಳಚಿ ಮತ್ತು ಗುಡ್ಡದ ಜನರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದೆ.
150 ಕ್ಕೂ ಹೆಚ್ಚು ಕುಟುಂಬಗಳು ವಾಸಿಸುವ ಕಣವೆಬಿಳಚಿ ಗುಡ್ಡದ ಜನರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೊಚ್ಚಿ ಹೋಗಿದ್ದು, ಜನರು ಪರದಾಡುವಂತಾಗಿದೆ. ಜನರಿಗೆ ಬೇರೆ ಊರಿಗೆ ಹೋಗಲು ಸಂಪರ್ಕ ರಸ್ತೆ ಇಲ್ಲದಂತಾಗಿದ್ದು, ಜನರು ದಿಕ್ಕು ತೋಚದಂತಾಗಿದ್ದಾರೆ. ಕೂಡಲೇ ಜಿಲ್ಲಾಡಳಿತ ಹಾಗೂ ನೀರಾವರಿ ಇಲಾಖೆ ಈ ಕಡೆ ಗಮನಹರಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಕರೆಬಿಳಚಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.



