ದಾವಣಗೆರೆ: ಸ್ವಲ್ಪ ಮಳೆ ಬಂದರೂ ಸಾಕು ನೀರು ತುಂಬಿಕೊಂಡು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಪಾಲಿಕೆ ಎದುರಿನ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಎಸ್.ಟಿ. ವೀರೇಶ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಜೆ ಮಳೆಯಾಗಿದ್ದರಿಂದ ರೈಲ್ವೆ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿತ್ತು. ಇದರಿಂದ ಸಾರ್ವಜನಿಕರು ಓಡಾಟಕ್ಕೆ ತೊಂದರೆ ಆಗುತ್ತಿತ್ತು. ಇದನ್ನು ಗಮಸಿದ ಮೇಯರ್ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ನೀರು ಸರಾಗವಾಗಿ ಹರಿಯದೇ ಇರುವುದರಿಂದ ತೊಂದರೆ ಉಂಟಾಗಿದೆ. ಇದರ ಜೊತೆಗೆ ಪಕ್ಕದ ಇಂಜಿನಿಯರ್ ಬಿಲ್ಡಿಂಗ್ ನಿಂದ ಚರಂಡಿ ನೀರು ಸೋರಿಕೆ ಆಗುತ್ತಿದೆ. ಈ ಬಗ್ಗೆ ಮೇಯರ್ ಪರಿಶೀಲಿಸಿದರು.

ಚರಂಡಿಯಲ್ಲಿ ತುಂಬಿದ್ದ ಕಸವನ್ನು ತಾವೇ ಸ್ವತಃ ತೆಗೆದು ನೀರು ಸರಾಗವಾಗಿ ಹರಿಯುವಂತೆ ಮಾಡಿದ ಮೇಯರ್ ಎಸ್. ಟಿ ವೀರೇಶ್ ಅವರು, ನಾಳೆ ಅಧಿಕಾರಗಳ ಜೊತೆ ಚರ್ಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು. ಈ ವೇಳೆ ಪಾಲಿಕೆ ಸದಸ್ಯ ಶಿವನಗೌಡ ಪಾಟೀಲ್ ಉಪಸ್ಥಿತರಿದ್ದರು.



