ದಾವಣಗೆರೆ: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮುಂದುವರಿದಿದ್ದು, ನಿನ್ನೆ (ಏ.19) ಸುರಿದ ಮಳೆಗೆ ಭತ್ತ, ಬಾಳೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಅನೇಕ ಮನೆಗಳು ಬಿದ್ದಿವೆ.
ಏ.19 ರಂದು 12.00 ಮಿ.ಮೀ. ಸರಾಸರಿ ಮಳೆಯಾಗಿದ್ದು. ಒಟ್ಟಾರೆ 9.10 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿಯಲ್ಲಿ ವಾಡಿಕೆ ಮಳೆ 3.00 ಮಿ.ಮೀ ಇದ್ದು 10.00 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 20.00 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರದಲ್ಲಿ 13.00 ಮಿ.ಮೀ ವಾಸ್ತವ ಮಳೆಯಾಗಿದೆ. ಹೊನ್ನಾಳಿಯಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 10.00 ಮಿ.ಮೀ ವಾಸ್ತವ ಮಳೆಯಾಗಿದೆ. ಜಗಳೂರಿನಲ್ಲಿ 10.00 ಮಿ.ಮೀ ವಾಸ್ತವ ಮಳೆಯಾಗಿದೆ. ನ್ಯಾಮತಿಯಲ್ಲಿ ವಾಡಿಕೆ ಮಳೆ 1.00 ಮಿ.ಮೀ ಇದ್ದು 11.00 ಮಿ.ಮೀ ವಾಸ್ತವ ಮಳೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸರಾಸರಿ ವಾಡಿಕೆ 1.00 ಮಿ.ಮೀ ಇದ್ದು ವಾಸ್ತವ ಮಳೆ 12.00 ಮಿ.ಮೀ ಆಗಿದೆ.
ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, 153 ಎಕರೆ ಭತ್ತದ ಬೆಳೆ ಹಾನಿಯಾಗಿದ್ದು ಒಟ್ಟು 5.30 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ನ್ಯಾಮತಿ ತಾಲ್ಲೂಕಿನಲ್ಲಿ 2 ಎಕರೆ ಬಾಳೆ ಮತ್ತು 1 ಎಕರೆ ಮೆಕ್ಕೆಜೋಳ ಬೆಳೆಗೆ ಹಾನಿಯಾಗಿ ಒಟ್ಟು 2.00 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 2 ಕಚ್ಚಾ ಮನೆ ಹಾನಿಯಾಗಿದ್ದು, 2 ಎಕರೆ ಬಾಳೆ ಬೆಳೆಗೆ ಹಾನಿಯಾಗಿ ಒಟ್ಟು 1.80 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 9.10 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.



