Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 29.3 ಮಿ,ಮೀ ಮಳೆ; 6.90 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 29.3 ಮಿ,ಮೀ ಮಳೆ; 6.90 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಜೂ.05 ರಂದು 29.3 ಮಿ.ಮೀ. ಸರಾಸರಿ ಮಳೆಯಾಗಿದ್ದು. 6.90 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ 23.2 ಮಿ.ಮೀ, ದಾವಣಗೆರೆ  16.4 ಮಿ.ಮೀ, ಹರಿಹರ 14.9 ಮಿ.ಮೀ, ಹೊನ್ನಾಳಿ 40.0 ಮಿ.ಮೀ, ಜಗಳೂರು 40.2 ಮಿ.ಮೀ, ನ್ಯಾಮತಿಯಲ್ಲಿ 40.6 ಮಿ.ಮೀ ಮಳೆಯಾಗಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 2 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.50 ಲಕ್ಷ, 2 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಮತ್ತು ಒಂದು ದನದ ಕೊಟ್ಟಿಗೆ ಹಾನಿಯಾಗಿದ್ದು, ರೂ.0.50 ಲಕ್ಷ ಒಟ್ಟು ರೂ.3.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 0.50 ಲಕ್ಷ ಮತ್ತು 0-10 ಗುಂಟೆ ಅಡಿಕೆ ಬೆಳೆ ಹಾನಿಯಾಗಿದ್ದು, ರೂ. 0.30 ಲಕ್ಷ ಒಟ್ಟು ರೂ. 0.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 7 ಕಚ್ಚಾಮನೆ ಭಾಗಶ: ಹಾನಿಯಾಗಿದ್ದು, ರೂ. 2.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ. 6.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top