Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 6 ಮಿ.ಮೀ ಮಳೆ ; ವಿವಿಧ ತಾಲ್ಲೂಕಿನಲ್ಲಿ 9.80 ಲಕ್ಷ ಹಾನಿ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 6 ಮಿ.ಮೀ ಮಳೆ ; ವಿವಿಧ ತಾಲ್ಲೂಕಿನಲ್ಲಿ 9.80 ಲಕ್ಷ ಹಾನಿ

ದಾವಣಗೆರೆ: ಜಿಲ್ಲೆಯಲ್ಲಿ ಜು.10 ರಂದು 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ.9.80 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿಯಲ್ಲಿ5.2 ಮಿ.ಮೀ, ದಾವಣಗೆರೆ ಮಳೆ 1.7 ಮಿ.ಮೀ, ಹರಿಹರ 4.0 ಮಿ.ಮೀ, ಹೊನ್ನಾಳಿ 8.6ಮಿ.ಮೀ, ಜಗಳೂರು 5.5 ಮಿ.ಮೀ, ನ್ಯಾಮತಿ 17.8 ಮಿ.ಮೀ ಮಳೆಯಾಗಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.1.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.3.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.2.30 ಲಕ್ಷ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.00 ಲಕ್ಷ ಮತ್ತು 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.60 ಲಕ್ಷ ಒಟ್ಟು ರೂ. 4.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.0.90ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಜಿಲ್ಲೆಯಲ್ಲಿ ಒಟ್ಟಾರೆ ರೂ.9.80 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top