Connect with us

Dvgsuddi Kannada | online news portal | Kannada news online

ದಾವಣಗೆರೆ ಸೇರಿದಂತೆ ಕೆಲ ಜಿಲ್ಲೆಯಲ್ಲಿಂದು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ದಾವಣಗೆರೆ

ದಾವಣಗೆರೆ ಸೇರಿದಂತೆ ಕೆಲ ಜಿಲ್ಲೆಯಲ್ಲಿಂದು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿಂದು  ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ  ಮಳೆಯಾಗುವ ಸಾಧ್ಯತೆ ಇದೆ.   ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ.  ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಾ. 28 ವರೆಗೆ  ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಮೂರು ದಿನ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಧಾರವಾಡ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top