Connect with us

Dvgsuddi Kannada | online news portal | Kannada news online

ದಾವಣಗೆರೆ; ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ; 6.0 ಮಿ.ಮೀ ಮಳೆ; 13.10 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ; ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ; 6.0 ಮಿ.ಮೀ ಮಳೆ; 13.10 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ನಿನ್ನೆ (ಜು.12) ಜಿಲ್ಲೆಯಲ್ಲಿ 6.0 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 13.10 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ 11.2 ಮಿ.ಮೀ, ದಾವಣಗೆರೆ 2.9 ಮಿ.ಮೀ, ಹರಿಹರ 4.0 ಮಿ.ಮೀ, ಹೊನ್ನಾಳಿ ಮಳೆ 6.1 ಮಿ.ಮೀ, ಜಗಳೂರು 0.8 ಮಿ.ಮೀ, ನ್ಯಾಮತಿ 13.3 ಮಿ.ಮೀ ಮಳೆಯಾಗಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.2.00 ಲಕ್ಷ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.00 ಲಕ್ಷ, 4 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.20 ಲಕ್ಷ ಒಟ್ಟು ರೂ. 5.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 4ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.2.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.00 ಲಕ್ಷ . 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.50 ಲಕ್ಷ ಮತ್ತು 2 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಒಟ್ಟು ರೂ. 4.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.1.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ
ಜಿಲ್ಲೆಯಲ್ಲಿ ಒಟ್ಟಾರೆ ರೂ. 13.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top