Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆಯಿಂದ 12.30 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆಯಿಂದ 12.30 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಜುಲೈ 17 ರಂದು 8.7 ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 12.30 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ 13.9 ಮಿ.ಮೀ, ದಾವಣಗೆರೆ 2.5 ಮಿ.ಮೀ, ಹರಿಹರ 1.1 ಮಿ.ಮೀ, ಹೊನ್ನಾಳಿ 11.8 ಮಿ.ಮೀ, ಜಗಳೂರು 5.7 ಮಿ.ಮೀ, ನ್ಯಾಮತಿ 21.0 ಮಿ.ಮೀ ಮಳೆಯಾಗಿದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.40 ಲಕ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.00 ಲಕ್ಷ ಮತ್ತು 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ.0.30 ಲಕ್ಷಒಟ್ಟುರೂ. 2.70 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.2.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ.0.30 ಲಕ್ಷಒಟ್ಟುರೂ. 1.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.2.50 ಲಕ್ಷ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ, 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 2.00 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 0.50 ಲಕ್ಷ ಒಟ್ಟು ರೂ. 6.00 ಲಕ್ಷಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ. 12.30 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಪಾಶಿ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top