Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 5.8 ಮಿ.ಮೀ ಮಳೆ ಅಬ್ಬರ ; 1 ಕೋಟಿ 14 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 5.8 ಮಿ.ಮೀ ಮಳೆ ಅಬ್ಬರ ; 1 ಕೋಟಿ 14 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಒಂದು ವಾರ ಕಾಲ ಬಿಡುವು ನೀಡಿದ್ದ‌ ಮಳೆ ಮತ್ತೆ ಶುರುವಾಗಿದೆ. ಆಗಸ್ಟ್ 21 ರಂದು 5.8ಮಿ.ಮೀ. ಸರಾಸರಿ ಮಳೆಯಾಗಿದ್ದು, ರೂ. 114.50 ಲಕ್ಷ ರೂ. ಅಂದಾಜು ನಷ್ಟ ಸಂಭವಿಸಿದೆ.ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ 4.6ಮಿ.ಮೀ, ದಾವಣಗೆರೆ 10.3ಮಿ.ಮೀ, ಹರಿಹರ 8.0ಮಿ.ಮೀ, ಹೊನ್ನಾಳಿ 3.1ಮಿ.ಮೀ, ಜಗಳೂರು 2.8ಮಿ.ಮೀ, ನ್ಯಾಮತಿ 6.3ಮಿ.ಮೀ ಮಳೆಯಾಗಿದೆ.ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 10 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 50.00 ಲಕ್ಷ, 19 ಪಕ್ಕಾಮನೆ ಭಾಗಶ: ಹಾನಿಯಾಗಿದ್ದು, ರೂ. 57.00 ಲಕ್ಷ, ಒಟ್ಟು ರೂ.107.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ.3.00 ಲಕ್ಷ, 3 ಪಕ್ಕಾ ಮನೆ ಭಾಗಶ: ಹಾನಿ ಯಾಗಿದ್ದು, ರೂ. 1.00 ಲಕ್ಷ, 2 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.2.50 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.00 ಲಕ್ಷ ಒಟ್ಟು ರೂ.7.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ. 114.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top