ದಾವಣಗೆರೆ: ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನಿನ್ನೆ ಜಿಲ್ಲೆಯಲ್ಲಿ (ಅ.05) 13.80 ಮಿ.ಮೀ ನಷ್ಟು ಸರಾಸರಿ ಮಳೆ ಸುರಿದಿದೆ. ಭಾರಿ ಮಳೆಗೆ ಜಿಲ್ಲಿಯ ವಿವಿಧ ತಾಲ್ಲೂಕಿನಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತಗ್ಗು ಪ್ರದೇಶದ ಮನೆಗಳು, ಬೆಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 29.05 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಚನ್ನಗಿರಿ 14.73 ಮಿ.ಮೀ, ದಾವಣಗೆರೆ 8.58 ಮಿ.ಮೀ, ಹರಿಹರ 14.05 ಮಿ.ಮೀ, ಹೊನ್ನಾಳಿ 19.60 ಮಿ.ಮೀ, ಜಗಳೂರು 12.08 ಮಿ.ಮೀ ಮಳೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 13.80 ಮಿ.ಮೀ ಮಳೆಯಾಗಿದೆ.ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.2 ಲಕ್ಷ ಮತ್ತು 3 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.2 ಲಕ್ಷ ಹಾಗೂ 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ.2 ಲಕ್ಷ, 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.0.40 ಲಕ್ಷ ಸೇರಿದಂತೆ ಒಟ್ಟು ರೂ.6.40 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.
ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ.1.50 ಲಕ್ಷ ಮತ್ತು 10 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ.3 ಲಕ್ಷ ಹಾಗೂ 3 ಎಕರೆ ಜೋಳದ ಬೆಳೆ ಹಾನಿಯಾಗಿದ್ದು ರೂ.0.75 ಲಕ್ಷ ಸೇರಿದಂತೆ ಒಟ್ಟು ರೂ. 5.25 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ.0.80 ಲಕ್ಷ ಮತ್ತು 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.0.40 ಲಕ್ಷ ಹಾಗೂ 1 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 0.30 ಲಕ್ಷ ಸೇರಿದಂತೆ ಒಟ್ಟು ರೂ.1.50 ಅಂದಾಜು ನಷ್ಟ ಸಂಭವಿಸಿರುತ್ತದೆ.
ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 15 ಎಕರೆ ಮೆಕ್ಕೆ ಜೋಳದ ಬೆಳೆ ಹಾನಿಯಾಗಿದ್ದು ರೂ. 15.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.0.90 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.