Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 4.3 ಮಿ.ಮೀ ಮಳೆ; 67 ಮನೆಗಳಿಗೆ ಹಾನಿ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ 4.3 ಮಿ.ಮೀ ಮಳೆ; 67 ಮನೆಗಳಿಗೆ ಹಾನಿ

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸೆ.07 ರಂದು 4.3 ಮಿ.ಮೀ. ಸರಾಸರಿ ಮಳೆಯಾಗಿದೆ. ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ.

ಚನ್ನಗಿರಿ ತಾಲ್ಲೂಕಿನಲ್ಲ್ಲಿ 4.6 ಮಿ.ಮೀ, ದಾವಣಗೆರೆ 5.4 ಮಿ.ಮೀ, ಹರಿಹರ 2.2 ಮಿ.ಮೀ, ಹೊನ್ನಾಳಿ 1.2 ಮಿ.ಮೀ, ಜಗಳೂರು 8.9 ಮಿ.ಮೀ, ನ್ಯಾಮತಿಯಲ್ಲಿ 3.2 ಮಿ.ಮೀ ಮಳೆಯಾಗಿದೆದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 1 ಮನೆ ಭಾಗಶ: ಹಾನಿಯಾಗಿವೆ, ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 4 ಭಾಗಶ: ಮನೆ ಹಾನಿಯಾಗಿದೆ, ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 5 ತೀವ್ರ ಮನೆ ಹಾನಿಯಾಗಿದೆ ಹಾಗೂ 5 ಭಾಗಶಃ ಹಾನಿಯಾಗಿದೆ, ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 14 ತೀವ್ರ ಮನೆಹಾನಿಯಾಗಿವೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಹಾಗೂ 6 ತೀವ್ರ ಮನೆ ಹಾನಿಯಾಗಿದ್ದು, 9 ಭಾಗಶಃ ಮನೆಗಳು ಹಾನಿಯಾಗಿವೆ. ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 22 ಭಾಗಶ: ಮನೆಗಳು ಹಾನಿಯಾಗಿವೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top