Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಮುಂದುವರೆದ ಮಳೆ‌; ತಾಲ್ಲೂಕುವಾರು ಮಳೆ ವಿವರ ಇಲ್ಲಿದೆ…

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಮುಂದುವರೆದ ಮಳೆ‌; ತಾಲ್ಲೂಕುವಾರು ಮಳೆ ವಿವರ ಇಲ್ಲಿದೆ…

ದಾವಣಗೆರೆ: ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆಯ ಅವಾಂತರಕ್ಕೆ ಜಿಲ್ಲೆಯ ಕೆರೆ, ಹಳ್ಳಗಳು ಉಕ್ಕಿ ಹರಿಯುತ್ತಿವೆ. ಇನ್ನು ಕೆಲವು ಕಡೆ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಈ ಬಾರಿ ಹೆಚ್ಚುವರಿ ಮಳೆಯಿಂದ ಮೆಕ್ಕೆಜೋಳ ಬೆಳೆಗೆ ಅಧಿಕ ಪ್ರಮಾಣದಲ್ಲಿ ಹಾನಿಯಾಗಿದೆ.

ಜಿಲ್ಲೆಯಲ್ಲಿ ಸೆ.11 ರಂದು 0.9 ಮಿ.ಮೀ. ಸರಾಸರಿ ಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈ ಕೆಳಕಂಡಂತಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 1.3 ಮಿ.ಮೀ, ದಾವಣಗೆರೆ 0.7 ಮಿ.ಮೀ, ಹರಿಹರ 0.4 ಮಿ.ಮೀ, ಹೊನ್ನಾಳಿ 1.2 ಮಿ.ಮೀ, ಜಗಳೂರು 1.8 ಮಿ.ಮೀ, ನ್ಯಾಮತಿಯಲ್ಲಿ 0.2 ಮಿ.ಮೀ ಮಳೆಯಾಗಿದೆ.

ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು 8 ಮನೆ ಹಾನಿಯಾಗಿವೆ. ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 8 ಮನೆಗಳು ತೀವ್ರ ಹಾನಿಯಾಗಿವೆ. ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top