Connect with us

Dvgsuddi Kannada | online news portal | Kannada news online

ಮುಂದಿನ ಮೂರು ದಿನ ದಾವಣಗೆರೆ ಸಹಿತ 17 ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಪ್ರಮುಖ ಸುದ್ದಿ

ಮುಂದಿನ ಮೂರು ದಿನ ದಾವಣಗೆರೆ ಸಹಿತ 17 ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ದಾವಣಗೆರೆ ಸಹಿತ 17 ಜಿಲ್ಲೆಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ, ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಕೊಪ್ಪಳ, ಕಲಬುರ್ಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top