ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ವಿಜಯನಗರ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಇಂದು (ಮೇ 22) ಮತ್ತು ನಾಳೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಮಾಹಿತಿ ನೀಡಿದೆ.