Connect with us

Dvgsuddi Kannada | online news portal | Kannada news online

ದಾವಣಗೆರೆ: ಗೋಡೆ ಕುಸಿದು ಹೆಣ್ಣು ಮಗು ಸಾವು; ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ

IMG 20230725 194046

ದಾವಣಗೆರೆ

ದಾವಣಗೆರೆ: ಗೋಡೆ ಕುಸಿದು ಹೆಣ್ಣು ಮಗು ಸಾವು; ಜಿಲ್ಲಾಧಿಕಾರಿಗಳಿಂದ 5 ಲಕ್ಷ ಪರಿಹಾರ

ದಾವಣಗೆರೆ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ಹರಿಹರ ತಾಲ್ಲೂಕಿನ ಕುಂಬಳೂರು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಕೆಂಚಪ್ಪ ಎಂಬುವರ ಪುತ್ರಿ ಒಂದು ವರ್ಷ ಐದು ತಿಂಗಳ ಸ್ಫೂರ್ತಿ ಹೆಣ್ಣು ಮಗು ಮೃತಪಟ್ಟಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ ರೂ.5 ಲಕ್ಷ ಪರಿಹಾರ ನೀಡಿದರು.

ತುಂಗಾಭದ್ರ ನದಿ ನೀರಿನ ಹರಿವು ಹೆಚ್ಚಳವಾದ ಹಿನ್ನಲೆಯಲ್ಲಿ ಉಕ್ಕಡಗಾತ್ರಿ, ಪತ್ಯಾಪುರ ರಸ್ತೆ ಸಂಪರ್ಕ ಕಡಿತವಾಗಿದ್ದು, ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅತಿಯಾದ ಮಳೆಯಿಂದಾಗಿ ಹರಿಹರ ತಾಲ್ಲೂಕಿನ ತಿಮ್ಮಿನಕಟ್ಟೆ ಗ್ರಾಮದಲ್ಲಿ ಕೃಷಿ ಜಮೀನುಗಳು ಜಲಾವೃತ ಗೊಂಡಿದ್ದು ಮಳೆಹಾನಿ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ಪರಿಶೀಲಿಸಿದರು. ಈ ವೇಳೆ ಹರಿಹರ ತಹಶೀಲ್ದಾರ್ ಪೃಥ್ವಿ ಸ್ಥಾನಿಕಂ, ಮಲೆಬೆನ್ನೂರು ಉಪತಹಶೀಲ್ದಾರ್ ರವಿ, ಹಾಗೂ ದೇವಸ್ಥಾನದ ಸದಸ್ಯರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top