ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮುಂಗಾರು ಪೂರ್ವ ಮಳೆ ಅರ್ಭಟಿಸಿದೆ. ಬಿರು ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ.
ದಾವಣಗೆರೆ ಸೇರಿ ಐದು ಮಹಾನಗರ ಪಾಲಿಕೆಗಳಿಗೆ ಶೀಘ್ರದಲ್ಲಿ ಚುನಾವಣೆ; ಆಯುಕ್ತ ಸಂಗ್ರೇಶಿ
ಮಧ್ಯಾಹ್ನ 3 ಗಂಟೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಸಂಜೆ 4 ಗಂಟೆಗೆ ಶುರುವಾಗ ಮಳೆ ಅರ್ಧ ಗಂಟೆಗೂ ಹೆಚ್ವು ಹೊತ್ತು ಜೋರು ಮಳೆಯಾಗಿದೆ. ಬಿರು ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಜನರಿಗೆ ಸಂಜೆ ಮಳೆ ತಂಪೆರೆದಿದೆ. ಕೊಂಡಜ್ಜಿ, ಬುಳ್ಳಾಪುರ, ಕೆಂಚನಹಳ್ಳಿ, ಗಂಗನರಸಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮದಲ್ಲಿ ಮಳೆಯಾಗಿದೆ.
ದಾವಣಗೆರೆ: ಕಾರು ಚಾಲನೆ ಮಾಡುವಾಗ
ಹೃದಯಾಘಾತ; ಗುತ್ತಿಗೆದಾರ ಸುರೇಶ್ ಪೈ ಸಾವು
ರಾಜ್ಯದ ಹಲವೆಡೆ ಮಾ.27 ವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಾ.25ರಂದು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಾ.26ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ. ಮಾ.27ರಂದು ಹಾಸನ, ಕೊಡಗು ಮತ್ತು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.



