Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ; 93.40 ಲಕ್ಷ ನಷ್ಟ

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ; 93.40 ಲಕ್ಷ ನಷ್ಟ

ದಾವಣಗೆರೆ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಅಪಾರ ಪ್ರಮಾಣದ ಮಳೆ ಹಾನಿಯಾಗಿದೆ. ನಿನ್ನೆ ರಾತ್ರಿ (ಅ.12) ಜಿಲ್ಲೆಯಲ್ಲಿ 28.25 ಮಿ.ಮೀ ಉತ್ತಮ ಮಳೆಯಾಗಿದ್ದು, ಒಟ್ಟು ರೂ.93.40 ಲಕ್ಷ ನಷ್ಟ ಸಂಭವಿಸಿದೆ.

ಚನ್ನಗಿರಿ 16.40 ಮಿ.ಮೀ, ದಾವಣಗೆರೆ 40.81 ಮಿ.ಮೀ, ಹರಿಹರ 52.65 ಮಿ.ಮೀ, ಹೊನ್ನಾಳಿ 22.20 ಮಿ.ಮೀ, ಹಾಗೂ ಜಗಳೂರು ತಾಲ್ಲೂಕಿನಲ್ಲಿ 9.20 ಮಿ.ಮೀ ಮಳೆಯಾಗಿದೆ. ದಾವಣಗೆರೆ ತಾಲ್ಲೂಕು ವ್ಯಾಪ್ತಿಯಲ್ಲಿ 3 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ. 3 ಲಕ್ಷ, 20 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 6 ಲಕ್ಷ ಹಾಗೂ 6 ಎಕರೆ ಜೋಳ, 1 ಎಕರೆ ಬಾಳೆ ಹಾಗೂ 10 ಎಕರೆ ತರಕಾರಿ ಬೆಳೆ ಹಾನಿಯಾಗಿದ್ದು, ರೂ.1.70 ಲಕ್ಷ ಒಟ್ಟು ರೂ.10.70 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 7 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 2.80 ಲಕ್ಷ ಹಾಗೂ 4 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.4 ಲಕ್ಷ, 16 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು ರೂ. 4.80 ಲಕ್ಷ ಒಟ್ಟು ರೂ.11.60 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.  ಹೊನ್ನಾಳಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 2 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 1 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು, ರೂ. 0.75 ಲಕ್ಷ, 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ. 0.25 ಲಕ್ಷ ಒಟ್ಟು ರೂ.1 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ತೀವ್ರ ಹಾನಿಯಾಗಿದ್ದು ರೂ. 2.40 ಲಕ್ಷ, 4 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 2 ಲಕ್ಷ ಮತ್ತು 6 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು ರೂ.13 ಲಕ್ಷ, 11 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 3.50 ಲಕ್ಷ ಹಾಗೂ 450 ಎಕರೆ ಮೆಕ್ಕೆ ಜೋಳ, 2 ಎಕರೆ ರಾಗಿ ಬೆಳೆ ಹಾನಿಯಾಗಿದ್ದು, ರೂ. 45.20 ಲಕ್ಷ ಒಟ್ಟು 68.10 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ಜಿಲ್ಲೆಯಲ್ಲಿ ಒಟ್ಟಾರೆ ರೂ.93.40 ಲಕ್ಷ ಅಂದಾಜು ನಷ್ಟ ಸಂಭವಿಸಿದ್ದು, ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top