ದಾವಣಗೆರೆ: ಜಿಲ್ಲೆಯಲ್ಲಿ ಕೆಲ ಕಡೆ ಮಾತ್ರ ಮುಂಗಾರು ಪೂರ್ವ ಮಳೆಯಾಗಿದ್ದು, ಇದುವರೆಗೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಏಪ್ರಿಲ್‌ನಲ್ಲಿ 32 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ,13 ಮಿ.ಮೀ. ಮಾತ್ರ ಮಳೆಯಾಗಿದೆ ಎಂದು ಕೃಷಿ ಇಲಾಖೆ ಮಾಹಿತಿ ನೀಡಿದೆ.
ಮಳೆ ಬಿದ್ದ ಕಡೆ ರೈತರು ಮುಂಗಾರು ಬಿತ್ತನೆಗೆ ಸಿದ್ಧತೆಯಲ್ಲಿ ತೊಡಗಿದ್ದಾರೆ. ಉಳಿದ ಕಡೆಗಳಲ್ಲಿ ಅಷ್ಟೊಂದು ಹಸಿ ಮಳೆಯಾಗಿಲ್ಲ. ವಾಡಿಕೆಗಿಂತ ಇದುವರೆಗೆ ಸಾಧಾರಣ ಮಳೆಯಾಗಿದೆ. ಏಪ್ರಿಲ್‌ನಲ್ಲಿ 32 ಮಿ.ಮೀ. ವಾಡಿಕೆಗೆ 13 ಮಿ.ಮೀ. ಮಾತ್ರ ಮಳೆಯಾಗಿದೆ. ಮೇ 7ರಿಂದ 13ರ ವರೆಗೆ ವಾಡಿಕೆಯಂತೆ 10.6 ಮಿ.ಮೀ. ಮಳೆಯಾಗಬೇಕಿತ್ತು, 18.3 ಮಿ.ಮೀ. ಆಗಿದೆ. ಆದರೆ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗಿಲ್ಲ, ಅಲ್ಲಲ್ಲಿ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 2.43 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿದೆ ಇಲಾಖೆ ಮಾಹಿತಿ ನೀಡಿದೆ.



