ದಾವಣಗೆರೆ: ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಶಾಲೆಗಳಿಗೆ ಇಂದು (ಜು.24) ರಜೆ ಘೋಷಣೆ ಮಾಡಲಾಗಿದೆ.
ದಾವಣಗೆರೆ ಜಿಲ್ಲೆಯ ಆಯಾ ತಾಲ್ಲೂಕಿನ ತಹಸೀಲ್ದಾರ್ ಹಾಗೂ ಬಿಇಓ ಗಳು ಮಳೆಯ ಬಗ್ಗೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ತೆಗೆದುಕೊಳ್ಳುಲು ಜಿಲ್ಲಾಧಿಕಾರಿ ಸೂಚಿಸಿದ್ದರು. ದಾವಣಗೆರೆ, ಹರಿಹರ, ಹೊನ್ನಾಳಿ, ನ್ಯಾಮತಿ, ಚನ್ನಗಿರಿ, ಜಗಳೂರು ತಾಲ್ಲೂಕಿನ ಎಲ್ಲಾ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲಾಗಿದೆ.
ಇಂದು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನೆಡೆಸುವ ಮೂಲಕ ಶಾಲಾ ದಿನಗಳನ್ನು ಹೊಂದಾಣಿಕೆ ಮಾಡಿಕೊಳ್ಳಲು ಮುಖ್ಶ ಶಿಕ್ಷಕರಿಗೆ ತಿಳಿಸಲಾಗಿದೆ.



