ದಾವಣಗೆರೆ: ಏ.21 ರಂದು ಶ್ರೀರಾಮನವಮಿ ಪ್ರಯುಕ್ತ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಿಕೆಯ ಪಶು ವೈದ್ಯಕೀಯ ಸೇವೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



