Connect with us

Dvgsuddi Kannada | online news portal | Kannada news online

ಪಡಿತರ ಕಾರ್ಡ್ ದಾರರ ಗಮನಕ್ಕೆ; ಡಿಸೆಂಬರ್ ತಿಂಗಳ ಪಡಿತರ ಹಂಚಿಕೆ; ನಿಮಗೆ ನಗದು ಹಣ ವರ್ಗಾವಣೆ ಆಗಿಲ್ಲವೇ? ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ….

ದಾವಣಗೆರೆ

ಪಡಿತರ ಕಾರ್ಡ್ ದಾರರ ಗಮನಕ್ಕೆ; ಡಿಸೆಂಬರ್ ತಿಂಗಳ ಪಡಿತರ ಹಂಚಿಕೆ; ನಿಮಗೆ ನಗದು ಹಣ ವರ್ಗಾವಣೆ ಆಗಿಲ್ಲವೇ? ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿ….

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹೊನ್ನಾಳಿ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಡಿಸೆಂಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14ಕೆ.ಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3ಕೆ.ಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆ.ಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.ಪ್ರತಿ ಕೆ.ಜಿ ಗೆ ರೂ.15ರಂತೆ ಒಪ್ಪಿಗೆ ನೀಡಿದ ಎ.ಪಿ.ಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5ಕೆ.ಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಪಡಿತರ ಚೀಟಿದಾರರ ಖಾತೆಗೆ ನೇರ ನಗದು ವರ್ಗಾವಣೆ ಸಂಬಂಧಿಸಿದಂತೆ, ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿಸಿಕೊಳ್ಳಬೇಕು ಹಾಗೂ ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಶಾಖೆಗಳಿಗೆ ಹಾಗೂ ಸ್ಥಳೀಯ ಆಹಾರ ನಿರೀಕ್ಷರನ್ನು ಸಂಪರ್ಕಿಸಿ ಸರಿಪಡಿಸಿಕೊಳ್ಳಬೇಕು ಎಂದು ಹೊನ್ನಾಳಿ ತಹಶೀಲ್ದಾರ್ ಪಟ್ಟರಾಜಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top