ದಾವಣಗೆರೆ: ಕೇಂದ್ರ ಮಾಜಿ ಸಚಿವ ದಿ. ಕೊಂಡಜ್ಜಿ ಬಸಪ್ಪ ಅವರ ಪುತ್ರ ಹಾಗೂ ದಾವಣಗೆರೆ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿ ಅವರ ತಂದೆಯಾದ ರವೀಂದ್ರನಾಥ್ ಕೊಂಡಜ್ಜಿ (68) ಇಂದು (ಫೆ.06) ಬೆಳಗ್ಗೆ 11 ಗಂಟೆಗೆ ಬೆಂಗಳೂರು ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಕೊಂಡಜ್ಜಿ ಬಸಪ್ಪ ಅವರ 8 ಮಕ್ಕಳಲ್ಲಿ 6ನೇಯವರಾದ ರವೀಂದ್ರನಾಥ್ ಕೊಂಡಜ್ಜಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ರವೀಂದ್ರನಾಥ್ ಕೊಂಡಜ್ಜಿ ಅವರು ವೃತ್ತಿಯಲ್ಲಿ ಇಂಜಿನೀಯರ್ ಆಗಿದ್ದರು. ಪತ್ನಿ, ಪುತ್ರ ನಿಖಿಲ್ ಕೊಂಡಜ್ಜಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ರವೀಂದ್ರನಾಥ್ ಅವರ ಸಹೋದರರಾದ ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ, ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಪಾಧ್ಯಕ್ಷ ಷಣ್ಮುಖಪ್ಪ ಕೊಂಡಜ್ಜಿ ಸೇರಿದಂತೆ ಕೊಂಡಜ್ಜಿ ಗ್ರಾಮದ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯನ್ನು ನಾಳೆ (ಫೆ.07) ಬೆಳಗ್ಗೆ 12 ಗಂಟೆಗೆ ಬೆಂಗಳೂರಲ್ಲಿ ನಡೆಯಲಿದೆ.
ದಾವಣಗೆರೆ: ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ಕೊಂಡಜ್ಜಿಗೆ ಪಿತೃ ವಿಯೋಗ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



