ದಾವಣೆಗೆರೆ : ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯಗೆ ನಿನ್ನೆಯಷ್ಟೇ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇಂದು ಅವರ ರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ಧಾರೆ.
ನಿನ್ನೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆ ಹೊನ್ನಾಳಿಯ ನಿವಾಸದಲ್ಲೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಆರೋಗ್ಯದಲ್ಲಿ ಏರುಪೇರು ಆಗಿದ್ದು, ಸ್ವಲ್ಪ ಮೈ ಕೈ ನೋವು, ಸ್ವಲ್ಪ ಸುಸ್ತು ಇದ್ದ ಹಿನ್ನಲೆ ಪರೀಕ್ಷೆಗೆ ಒಳಪಟ್ಟಾಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಸಿಕೊಳ್ಳಲು ಹೆಚ್ಚಿಸಿ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ದಾವಣಗೆರೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬೆಳಿಗ್ಗೆಯಿಂದ ನೂರಾರು ಜನ ಕ್ಯೂ ನಲ್ಲಿ ನಿಂತು ಟೆಸ್ಟ್ ಕೊಡುತ್ತಿದ್ದಾರೆ. ಇನ್ನೂ ಎರಡು ಟೆಸ್ಟಿಂಗ್ ಸೆಂಟರ್ ಆರಂಭಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.



