ದಾವಣಗೆರೆ: ಜಿಲ್ಲೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಲಭ್ಯವಿರುವ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಬಹುದಾದಂತಹ ಸ್ಥಾನಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಕೊನೆ ದಿನ ಯಾವಾಗ..? ಯಾವ ದಾಖಲೆ ಅಗತ್ಯ..?
ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಜೂನ್ 21 ರಿಂದ ಆರಂಭವಾಗುತ್ತಿದ್ದು ಎಲ್ಲಾ ಕ್ರೈಸ್, ಮೊರಾರ್ಜಿ, ಕಿತ್ತೂರು, ಅಂಬೇಡ್ಕರ್, ಇಂದಿರಾಗಾಂಧಿ ಹಾಗೂ ಪ್ರತಿಭಾನ್ವಿತ ವಸತಿ ಶಾಲೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಅಂಕಪಟ್ಟಿ, ಶಾಲಾ ದೃಢೀಕರಣ ಪತ್ರ, ಎಸ್‍ಎಟಿ (ಸ್ಯಾಟ್) ಸಂಖ್ಯೆಯೊಂದಿಗೆ ಆಧಾರ್ ಕಾರ್ಡ್ ನಕಲು ಪ್ರತಿ, ಇತ್ತೀಚಿನ 2 ಭಾವಚಿತ್ರಗಳನ್ನು ಭರ್ತಿ ಮಾಡಿದ ಅರ್ಜಿಗಳನ್ನು ದಾವಣಗೆರೆ ಉಪವಿಭಾಗ ವ್ಯಾಪ್ತಿಯ ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಗೆ ಹಾಗೂ ಹೊನ್ನಾಳಿ ಉಪವಿಭಾಗ ವ್ಯಾಪ್ತಿಯ ಚನ್ನಗಿರಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಪ್ರವೇಶ ಪರೀಕ್ಷೆ ಯಾವಾಗ..?
ಪ್ರವೇಶ ಪರೀಕ್ಷೆಯನ್ನು ಜೂನ್ 29 ರಂದು ಬೆಳಿಗ್ಗೆ 11 ರಿಂದ 12ರವರೆಗೆ ಜಿಲ್ಲೆಯ ದೇವರಬೆಳಕೆರೆ ಮೊರಾರ್ಜಿ ದೇಸಾಯ ವಸತಿ ಶಾಲೆ ಹಾಗೂ ಚನ್ನಗಿರಿ ತಾಲ್ಲೂಕಿನ ಕಾಕನೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.